ಕರೊನಾ ಹಿನ್ನೆಲೆ ರೇಷ್ಮೆ ಇಲಾಖೆಯಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಅಧಿಕಾರಿಗಳು ಅಮಾನತು

SUSPEND
Published on

ಬೆಂಗಳೂರು: ರೇಷ್ಮೆ ಇಲಾಖೆಯಲ್ಲಿ ಕರ್ತವ್ಯಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಮಳವಳ್ಳಿ ಮಾರುಕಟ್ಟೆಯ ರೇಷ್ಮೆ ವಿಸ್ತರಣಾ ಅಧಿಕಾರಿ ಎಂ ಮಹಾದೇವ್ ಹಾಗೂ ಮಳವಳ್ಳಿ ವಿಭಾಗದ ರೇಷ್ಮೆ ಸಹಾಯಕ ನಿರ್ದೇಶಕ ಎಂ.ಪಿ.ಉಮೇಶ್ ಇವರನ್ನ ತಕ್ಷಣವೇ ಅಮಾನತು ಮಾಡಿ ಆದೇಶಿಸಲಾಗಿದೆ.

ಕರೊನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳನ್ನು ಕರೆದು ಸಚಿವರು ಸಭೆ ನಡೆಸಿದ್ದರು. ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ರೇಷ್ಮೆ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಮುಂಜಾಗ್ರತೆ ವಹಿಸಬೇಕು. ಯಾವುದೇ ಕಾರಣಕ್ಕು ರೈತರಿಗೆ ತೊಂದರೆ ಆಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು.

ಇಷ್ಟೇ ಅಲ್ಲದೆ, ರೇಷ್ಮೆ ಗೂಡಿನ ವಹಿವಾಟು ನಡೆಸಲು ಸ್ಪಷ್ಟ ಮಾರ್ಗಸೂಚಿ ನೀಡಲಾಗಿತ್ತು. ಆದರೂ ಈ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ. ಸ್ಪಷ್ಟ ಆದೇಶ ಇದ್ದರೂ ಪಾಲಿಸದಿರುವುದು ಮೆಲ್ನೋಟಕ್ಕೆ ಕಂಡುಬಂದಿದ್ದು, ಈ ಕಾರಣಕ್ಕಾಗಿ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net