

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಮಾಜ ಸೇವೆಯಲ್ಲಿ ಪರಿಶ್ರಮ ಮತ್ತು ನಿಸ್ವಾರ್ಥದಿಂದ ತೊಡಗಿಸಿಕೊಳ್ಳಬೇಕು ಎಂದು ಜನಜಾಗೃತಿ ವೇದಿಕೆ ಸದಸ್ಯ ಮಹಾವೀರ ಉಪಾಧ್ಯೆ ಹೇಳಿದರು.
ನಗರದ ಸುವರ್ಣ ಎಜುಕೇಶನ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ನ ಜಿಲ್ಲಾ ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷ ವಸಂತ ಅರ್ಕಾಚಾರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಹಲವಾರು ಕಾರ್ಯಕ್ರಮಗಳ ಮೂಲಕ ಜನರಿಗೆ ಸೇವೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ವೇದಿಕೆ ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ವಸಂತ ಅರ್ಕಾಚಾರ ಅವರಂತಹ ಕ್ರಿಯಾಶೀಲ ವ್ಯಕ್ತಿ ವೇದಿಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸುವರ್ಣ ಎಜುಕೇಶನ್ ಟ್ರಸ್ಟ್ನ ಸವಿತಾ ಅಮರಶೆಟ್ಟಿ ಮಾತನಾಡಿ, ಹೊಸ ಅಧ್ಯಕ್ಷರ ಆಯ್ಕೆಯಿಂದ ವೇದಿಕೆ ಚಟುವಟಿಕೆಗಳಿಗೆ ಇನ್ನಷ್ಟು ವೇಗ ಸಿಗಲಿದೆ ಎಂಬ ನಿರೀಕ್ಷೆ ಇದೆ. ವೇದಿಕೆಯ ಎಲ್ಲ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಜನಜಾಗೃತಿ ವೇದಿಕೆ ಸದಸ್ಯರಾದ ಸಿ.ಪಿ.ಮಾಯಾಚಾರ, ಕರಿಯಪ್ಪ ಅಮ್ಮಿನಬಾವಿ, ಪುಂಡಲೀಕ ಹಡಪದ, ವಿಶ್ವನಾಥ ಅಮರಶೆಟ್ಟಿ, ನಾರಾಯಣ ಬಡಿಗೇರ, ಪ್ರಿಯಾ ಅಂಗಡಿ, ಹನಮಂತ ಗುಮ್ಮಗೋಳ, ಇತರರು ಇದ್ದರು.