ಇಂದಿನಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ

hn 16-5
ವಿಜಯಪುರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಸುರೇಶ ಬಿರಾದಾರ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಸವರಾಜ ಬೈಚಬಾಳ, ಕೃಷ್ಣಾ ಗೋನ್ಹಾಳಕರ, ವಿಜಯ ಜೋಶಿ ಇದ್ದರು.
Published on

ವಿಜಯಪುರ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿಯಿಂದ ಸೆ.17ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸುರೇಶ ಬಿರಾದಾರ ಹೇಳಿದರು.

ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬಡವರ ಸೇವೆ, ಜನರ ಕಲ್ಯಾಣಕ್ಕಾಗಿ ಉತ್ತಮ ಆಡಳಿತ ನೀಡುತ್ತಿದೆ. ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ರಕ್ತದಾನ ಶಿಬಿರ, ಕ್ಷಯರೋಗಿಗಳ ದತ್ತು ಪಡೆದುಕೊಳ್ಳುವುದು ಸೇರಿದಂತೆ ಅಂಗವಿಕಲರಿಗೆ ಕೃತಕ ಕೈಕಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗಾಂಧೀಜಿ ಕನಸಿನಂತೆ ಸ್ವಚ್ಛ ಭಾರತವನ್ನಾಗಿಸಲು ಪ್ರಧಾನಿ ಮೋದಿ ಅವರು ಹಮ್ಮಿಕೊಂಡಿರುವ ಸರ್ಕಾರದ ‘ಸ್ವಚ್ಛ ಭಾರತ ಅಭಿಯಾನ’ ಮೂಲಕ ಅನೇಕ ಕೆರೆ, ಬಾವಿ, ನದಿಗಳು, ಸಾರ್ವಜನಿಕ ಸ್ಥಳಗಳನ್ನು ಶುಚಿಗೊಳಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿತ್ಯ ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

ಭಾರತವನ್ನು ಕ್ಷಯ ರೋಗ ಮುಕ್ತವಾಗಿಸುವ ಪಣ ತೊಟ್ಟಿದ್ದು, ಆರೋಗ್ಯ ಶಿಬಿರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಏಕ್ ಭಾರತ ಶ್ರೇಷ್ಠ ಭಾರತ, ವೋಕಲ್ ಫಾರ್ ಲೋಕಲ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಸವರಾಜ ಬೈಚಬಾಳ, ಕೃಷ್ಣಾ ಗೋನ್ಹಾಳಕರ, ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net