

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವ ಸಹಾಯವೇ ಸಹಕಾರ ತತ್ವದ ಬುನಾದಿ. ಸಹಕಾರ ಕ್ಷೇತ್ರದಲ್ಲಿ ಲಾಭಕ್ಕಿಂತ ಸೇವೆಯೇ ಮುಖ್ಯ ಎಂದು ಸಮಾಜ ಚಿಂತಕ ಡಾ. ಎಂ. ಆರ್. ರಂಗನಾಥ ಹೇಳಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ವಿರೂಪಾಕ್ಷ ಶಿವಯೋಗೆಪ್ಪ ಬಸವನಾಳ ದತ್ತಿ ನಿಮಿತ್ತ ಇತ್ತೀಚೆಗೆ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ನೀರಾವರಿ ಹಾಗೂ ಸಹಕಾರ ವಿಷಯ ಕುರಿತು ಅವರು ಮಾತನಾಡಿದರು.
ಸಮಾನತೆ ಮತ್ತು ಉಳಿತಾಯ ತತ್ವದಡಿ ಉದಯವಾದ ಸಹಕಾರ ಸಂಘಗಳು ಭಾರತದ ಪ್ರಜಾತಾಂತ್ರಿಕ ವ್ಯವಸ್ಥೆಯ ಸ್ವಯಂ ಪ್ರೇರಿತ ವಿಧಾನವಾಗಿದೆ. ಅವಿಭಜಿತ ಧಾರವಾಡ ಜಿಲ್ಲೆಯ ಗದಗ ತಾಲೂಕಿನ ಕಣಗಿನಹಾಳದಲ್ಲಿ ಭಾರತದ ಪ್ರಪ್ರಥಮ ಸಹಕಾರ ಸಂಘವನ್ನು ಸಿದ್ಧನಗೌಡ ಪಾಟೀಲ ಅವರು 1905ರಲ್ಲಿ ಗ್ರಾಮೀಣ ರೈತರಿಗಾಗಿ ಆರಂಭಿಸಿದರು. ಭಾರತದಲ್ಲಿ ಸಹಕಾರ ಸಂಘ ಸ್ಥಾಪನೆಗೆ ಮೊದಲ ಹೆಜ್ಜೆ ಇಟ್ಟ ರಾಜ್ಯವೇ ಕರ್ನಾಟಕ ಎಂಬುದು ಹೆಮ್ಮೆಯ ಸಂಗತಿ. ಇಂದು ವಿವಿಧ ಉದ್ದೇಶಗಳನ್ನಿಟ್ಟುಕೊಂಡು 35 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಅಧ್ಯತೆ ವಹಿಸಿದ್ದ ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಬಹಳ ಮುಖ್ಯ ಎಂದರು.
ದತ್ತಿದಾನಿ ಕೆಸಿಸಿ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಎಸ್.ಜಿ. ಪಾಟೀಲ ಮಾತನಾಡಿದರು. ರವೀಂದ್ರ ಬಸವನಾಳ, ಡಾ. ಜಿನದತ್ತ ಹಡಗಲಿ, ಡಾ. ಮೃತ್ಯುಂಜಯ ಶೆಟ್ಟರ, ಸಿ.ಎಸ್. ಪಾಟೀಲ, ಆರ್.ಎಂ. ಪಾಟೀಲ, ಎಂ.ಎಂ. ಪಾಟೀಲ, ಬಿ.ಎಲ್. ಶಿವಳ್ಳಿ, ಶಂಕರಲಿಂಗ ಶಿವಳ್ಳಿ, ಶಾರದಾ ಕೌದಿ, ಪ್ರದಿಪ, ಬಸವನಾಳ ಹಾಗೂ ಪಾಟೀಲ ಕುಟುಂಬಸ್ಥರು, ಇತರರು ಇದ್ದರು.
ವೀರಣ್ಣ ಒಡ್ಡೀನ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಕುಂಬಿ ನಿರೂಪಿಸಿದರು. ಸತೀಶ ತುರಮರಿ ವಂದಿಸಿದರು.