

ಅರಸೀಕೆರೆ: ಹಲವು ವರ್ಷಗಳಿಂದ ಪಕ್ಷಕ್ಕೆ ಸಲ್ಲಿಸಿರುವ ಸೇವೆ ಮನಗಂಡು ವರಿಷ್ಠರು ನನಗೆ ಹೊಸ ಜವಾಬ್ದಾರಿ ನೀಡಿದ್ದಾರೆ ಎಂದು ಅರಸೀಕೆರೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಜಿವಿಟಿ ಬಸವರಾಜ್ ಹೇಳಿದರು.
ಹಿರಿ-ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಲಾಗುವುದು. ಅಲ್ಲದೆ ನಗರದ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಗರ ಸೇರಿದಂತೆ ತಾಲೂಕಿನಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಪಾಲಿಸುವ ಮೂಲಕ ಸಂಭವನೀಯ ಅಪಾಯದ ಬಗ್ಗೆ ಜಾಗರೂಕರಾಗಿಬೇಕು ಎಂದರು.
ಬಿಜೆಪಿ ನಗರ ಕಾರ್ಯದರ್ಶಿ ವಿನೋದ್ ಕುಟ್ಟಿ, ಮುಖಂಡರಾದ ರೇಣುಕಪ್ಪ, ಸರ್ವೆಚಂದ್ರು, ಅರುಣ್ ಕುಮಾರ್, ಮಂಜುನಾಥ್, ಉಮೇಶ್ ಭೋವಿ ಸುದ್ದಿಗೋಷ್ಠಿಯಲ್ಲಿದ್ದರು.