

ವಿಜಯವಾಣಿ ಸುದ್ದಿಜಾಲ ಬೈಂದೂರು
ಜೀವನ ದೇವರ ವರವಾಗಿದ್ದು, ನಿಸ್ವಾರ್ಥ ಸೇವೆ ಮೂಲಕ ಅದನ್ನು ಸಾರ್ಥಕಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ.ನಾಯಕ್ ಹೇಳಿದರು.
ಸಳ್ಕೊಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಾಬು ಗೌಡ ಅವರ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಜಡ್ಕಲ್ ಗ್ರಾಮದ ಜಡ್ಕಲ್ ಗ್ರಾಪಂ ಅಧ್ಯಕ್ಷೆ ಪಾರ್ವತಿ ಬೆಳಾರಿ ಸಮಾರಂಭ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಘುರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸೇವಾ ನಿವೃತ್ತಿ ಹೊಂದಿದ ಬಾಬು ಗೌಡ ಶಾಲಾ ಅಭಿವೃದ್ಧಿಗೆ 55 ಸಾವಿರ ರೂ. ದೇಣಿಗೆ ನೀಡಿದರು.
ಜಡ್ಕಲ್ ಗ್ರಾಪಂ ಉಪಾಧ್ಯಕ್ಷೆ ಭಾರತಿ ಜಿ.ಶೆಟ್ಟಿ, ಸದಸ್ಯ ನಾಗೇಶ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ ನಾಯಕ್, ಬಿಆರ್‌ಪಿ ರಾಮಕೃಷ್ಣ ದೇವಾಡಿಗ, ವಂಡ್ಸೆ ಸಿಆರ್‌ಪಿ ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ಶಿವರಾಮ ನಾಯ್ಕ, ಉದ್ಯಮಿ ಸುಬೋದ್ ಶೆಟ್ಟಿ ಬಡಗುಳಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಕ್ಷತ್ರ ನಾಯ್ಕ ಮಂಗಳಗುಂಡಿ, ಎಸ್‌ಡಿಎಂಸಿ ಉಪಾಧ್ಯಕ್ಷ ಜೋಮೋನ್ ವಡಕೇಮುರಿ, ಸುವರ್ಣ ವಿದ್ಯಾನಿಧಿ ಅಧ್ಯಕ್ಷ ಸುರೇಂದ್ರ ನಾಯ್ಕ ನೇತ್ರಾಡಿ, ಉಪಾಧ್ಯಕ್ಷ ಮಹಾಬಲ ಪೂಜಾರಿ ಅಡಿಗದ್ದೆ, ಭಾರತ ಮಾತಾ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಅನ್ನಮ್ಮ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಭಾಸ್ಕರ್ ನಾಯ್ಕ ಸ್ವಾಗತಿಸಿದರು. ಸಹಶಿಕ್ಷಕಿ ಶಿಜಿ ಸೆಬಾಸ್ಟಿಯನ್ ನಿವೃತ್ತರ ಬಗ್ಗೆ ಮಾತನಾಡಿದರು. ಸಹಶಿಕ್ಷಕರಾದ ಸತೀಶ್ ದೇವಾಡಿಗ, ಗಿರೀಶ್ ನಿರೂಪಿಸಿದರು. ಸಹಶಿಕ್ಷಕಿ ಗೀತಪ್ರಿಯ ಸನ್ಮಾನ ಪತ್ರ ವಾಚಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಪಿ. ವಂದಿಸಿದರು. ಗೌರವ ಶಿಕ್ಷಕಿಯರಾದ ಜಯಂತಿ, ಬೀನಾ, ಶ್ರೀಜಾ ಸಹಕರಿಸಿದರು.