ಸೇವಾ ಭದ್ರತೆಗೆ ಚಳ್ಳಕೆರೆಯ ಅತಿಥಿ ಉಪನ್ಯಾಸಕರ ಆಗ್ರಹ

CLK UPANYASAKARU 18
Published on

ಚಳ್ಳಕೆರೆ: ಚಳಿಗಾಲ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿ ಸೇವಾ ಭದ್ರತೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಎಚ್‌ಪಿಪಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಶನಿವಾರ ತಹಸೀಲ್ದಾರ್ ಸುರೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕೇವಲ 11 ಸಾವಿರ ಗೌರವಧನದಂತೆ 14,447 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಮೂರು ತಿಂಗಳಿಗೊಮ್ಮೆ ಕನಿಷ್ಠ ಗೌರವಧನ ಹೆಚ್ಚಳ ಮತ್ತು ಸೇವಾ ಭದ್ರತೆ ನೀಡುವಂತೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದರು.

ಗೌರವಧನದಲ್ಲಿ ಸೇವೆ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಸೇವಾ ಭದ್ರತೆ, ಪಿಎಫ್, ಇಎಸ್‌ಐ ಸೌಲಭ್ಯಗಳು ದೊರಕಿಸಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರಾದ ಬಸವರಾಜ, ಬಿ.ಟಿ. ಸುರೇಶ್, ರಮೇಶ್, ಯರ‌್ರಿಸ್ವಾಮಿ, ಸಂದೀಪ್, ಪುಪ್ಪಾ, ಮಮತಾ, ಶಶಿಕಲಾ, ಗಾಯಿತ್ರಿ, ಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net