ಸೇವಾ ಭದ್ರತೆ, ಗೌರವಧನ ಹೆಚ್ಚಳಕ್ಕೆ ಪಟ್ಟು

FotoJet (2)
Published on

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಎಡಿಸಿಗೆ ಮನವಿ

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಡಳಿತ ಭವನದ ಎದುರು ಸೋಮವಾರ ಧರಣಿ ಕುಳಿತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತೆಯರು ಹೆಚ್ಚುವರಿ ಜಿಲ್ಲಾಧಿಕಾರಿ ಎನ್. ಭಾಸ್ಕರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದರ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 3 ಸಾವಿರ ರೂ ನೀಡಬೇಕು, ಸೇವಾ ನಿವೃತ್ತಿ ಪಡೆಯುವವರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ 3 ಲಕ್ಷ ರೂ. ನೀಡಬೇಕು, ಆರೋಗ್ಯ, ಸೇವಾ ಭದ್ರತೆ, ಸುರಕ್ಷಿತ ಕೆಲಸ ಸೇರಿ ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆ ನೇತೃತ್ವವನ್ನು ಸಂಘದ ಜಿಲ್ಲಾ ಗೌರವಾಧ್ಯಕ್ಷ ಜಿ. ಹನುಮೇಶ್, ಅಧ್ಯಕ್ಷ ಸರಸ್ವತಮ್ಮ, ಕಾರ್ಯದರ್ಶಿ ರೇಷ್ಮಾ ಮತ್ತಿತರರು ವಹಿಸಿದ್ದರು.

ಜಿಲ್ಲಾಡಳಿತಕ್ಕೆ ಪ್ರತ್ಯೇಕ ಮನವಿ: ಜಿಲ್ಲಾಡಳಿತ ಭವನದಲ್ಲಿ ಅರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗ ಳೊಂದಿಗೆ ಚರ್ಚಿಸಿದರು. ನಿಯಮಾನುಸಾರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕರ್ತವ್ಯದ ವೇಳೆ ಕಿರುಕುಳಕ್ಕೆ ತಡೆ, ಕಾಲಕಾಲಕ್ಕೆ ಕುಂದುಕೊರತೆ ಸಭೆ ಆಯೋಜನೆ, ಪ್ರತಿ ತಿಂಗಳು ಸಮಯಕ್ಕೆ ಸರಿಯಾಗ ವೇತನ ವಿತರಣೆ, ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ರಾಂತಿ ಕೊಠಡಿ ಸ್ಥಾಪನೆ ಬಗ್ಗೆ ಗಮನ ಸೆಳೆಯಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net