ಸಾಮಾಜಿಕ ಚಟುವಟಿಕೆಯಿಂದ ಬಡವರ ಸೇವೆ

samajika chatuvatike
ಹೆಬ್ರಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಶಾಂತಿನಿಕೇತನ ಯುವವೃಂದ ಹಾಗೂ ಶ್ರೀ ರಾಘವೇಂದ್ರ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹೆಬ್ರಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಗೌರವ್ ಅವರನ್ನು ಸನ್ಮಾನಿಸಲಾಯಿತು.
Published on

ಹೆಬ್ರಿ: ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಹೆಬ್ರಿಯಲ್ಲಿ ನಿರಂತರವಾಗಿ ಜನರು ಸಹಕಾರ ನೀಡುತ್ತಿರುವುದರಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಯಿತು. ಶಾಂತಿನಿಕೇತನದ ಸಾಮಾಜಿಕ ಚಟುವಟಿಕೆ, ಬಡ ಜನರ ಪರ ಇರುವ ತುಡಿತಕ್ಕೆ ನಾನು ಧನ್ಯ ಎಂದು ಹೆಬ್ರಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಗೌರವ್ ಹೇಳಿದರು.

ಹೆಬ್ರಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಶಾಂತಿನಿಕೇತನ ಯುವವೃಂದ ಹಾಗೂ ಶ್ರೀ ರಾಘವೇಂದ್ರ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಗೌರವ ಸ್ವೀಕರಿಸಿ ಮಾತನಾಡಿದರು.

ಶಾಂತಿನಿಕೇತನ ಸಂಸ್ಥಾಪಕ ರಾಜೇಶ್, ಶಾಂತಿನಿಕೇತನ ಅಧ್ಯಕ್ಷ ದೀಕ್ಷಿತ್ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ನರೇಂದ್ರ ನಿತಿನ್, ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಹೆಬ್ರಿಯ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಗಳು ಶಾಂತಿನಿಕೇತನದ ಸಾಮಾಜಿಕ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ನೀಡಿದ್ದಾರೆ. ವನಮಹೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದವರನ್ನು ಗೌರವಿಸಲು ಸಂತೋಷವಾಗುತ್ತಿದೆ. -ರಾಜೇಶ್, ಶಾಂತಿನಿಕೇತನ ಸಂಸ್ಥಾಪಕ

-ರಾಜೇಶ್, ಶಾಂತಿನಿಕೇತನ ಸಂಸ್ಥಾಪಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net