ನಾಯಕತ್ವ ಗುಣ ಬೆಳೆಸಲು ಸೇವಾದಳ ಸಹಕಾರಿ

YLP SEVADALA
Published on

ಯಲ್ಲಾಪುರ: ವಿದ್ಯಾರ್ಥಿಗಳು ಅಂಕ ಗಳಿಕೆಯ ಓಟದಲ್ಲಿ ಅತಿಯಾದ ಒತ್ತಡದಲ್ಲಿದ್ದಾರೆ. ಅದನ್ನು ಕಡಿಮೆ ಮಾಡಲು ಸೇವಾದಳದಂತಹ ಸಂಘಟನೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಬಿಇಒ ಎನ್.ಆರ್. ಹೆಗಡೆ ಹೇಳಿದರು.</p><p>ಪಟ್ಟಣದ ಅಡಕೆ ಭವನದಲ್ಲಿ ಭಾರತ ಸೇವಾದಳದ ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಭಾರತ ಸೇವಾದಳದ ಶಾಖಾ ನಾಯಕ-ನಾಯಕಿಯರ ಪುನಃಶ್ಚೇತನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. </p><p>ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ, ಭಾರತ ಸೇವಾದಳದ ತಾಲೂಕು ಸಂಘಟಕ ಸಂಜೀವಕುಮಾರ ಹೊಸ್ಕೇರಿ ಅವರನ್ನು ಗೌರವಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್. ಭಟ್ಟ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಬಿಆರ್​ಸಿ ಸಂಯೋಜನಾಧಿಕಾರಿ ಸಂತೋಷ ಜಿಗಳೂರು, ಶಿಕ್ಷಣ ಸಂಯೋಜಕ ಪ್ರಶಾಂತ ಜಿ.ಎನ್., ಸೇವಾದಳ ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ, ತಾಲೂಕು ಸಂಘಟಕ ಸಂಜೀವಕುಮಾರ ಹೊಸ್ಕೇರಿ, ಇತರರಿದ್ದರು. ಶಿಕ್ಷಕ ವಿನಾಯಕ ಗಾಂವ್ಕರ, ಇಂದಿರಾ ಎನ್.ಎಚ್., ಹಾಗೂ ಶ್ರೀಕಾಂತ ವೈದ್ಯ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net