ಸತೀಶ್ ಜವರೇಗೌಡಗೆ ಸೇವಾಭೂಷಣ ಪ್ರಶಸ್ತಿ: ನ.30ರಂದು ಮೈಸೂರಿನಲ್ಲಿ ಪ್ರದಾನ

Sevabusana award mandya
Published on

ಮಂಡ್ಯ: ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ವತಿಯಿಂದ ಕೊಡಮಾಡುವ ಪ್ರಸಕ್ತ ಸಾಲಿನ ಟಿ.ಎನ್.ದಾಸೇಗೌಡ ಸೇವಾಭೂಷಣ ಪ್ರಶಸ್ತಿಗೆ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ತಾಲೂಕಿನ ಮಂಗಲ ಗ್ರಾಮದ ಟಿ.ಸತೀಶ್ ಜವರೇಗೌಡ ಆಯ್ಕೆಯಾಗಿದ್ದಾರೆ.

ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ನ.30ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಿರುವ ಸಮಾರಂಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಎಚ್.ಕೆ.ರಾಮು ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷೆ ಎಚ್.ಎಲ್.ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net