ಕಂದಕಕ್ಕೆ ಬಸ್​ ಉರುಳಿ ಹಲವರಿಗೆ ಗಾಯ

20 08 2025_BGR_RURAL-PAGE_02
Published on

ಹೊಸೂರು: ರಾಯಕೊಟ್ಟೆ&ಹೊಸೂರು ಹೆದ್ದಾರಿಯ ಕರುಕಂಪಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಧುರೈನ ಮಾಟುದಾವಣಿ ಬಸ್​ ನಿಲ್ದಾಣದಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್​ ಮಂಗಳವಾರ ಮುಂಜಾನೆ ಅಪಘಾತವಾಗಿದ್ದು, ಗಾಯಾಳುಗಳನ್ನು ಆಂಬುಲೆನ್ಸ್​ ಮೂಲಕ ಹೊಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಂಭೀರ ಗಾಯಗೊಂಡ ಮೂವರಲ್ಲಿ ಇಬ್ಬರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ, ಒಬ್ಬರನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉದ್ದನಪಲ್ಲಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net