

ಕಾರವಾರ: ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದ 85 ಮಕ್ಕಳನ್ನು ಗುರುತಿಸಲಾಗಿದ್ದು, ಪ್ರಸ್ತುತ 62 ಮಕ್ಕಳು ಇದ್ದಾರೆ. ಅವರು ಸಂಪೂರ್ಣ ಗುಣಮುಖರಾಗುವವರೆಗೆ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಽಕಾರಿಗಳು ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದರು.
ಜಿಲ್ಲಾಽಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಅಂಗನವಾಡಿಗಳಲ್ಲಿ ಪರಿಶೀಲನೆ ನಡೆಸಿ, ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಚಿಕಿತ್ಸೆ ನೀಡಬೇಕು. ವೈದ್ಯಾಧಿಕಾರಿಗಳು ಅಂಗನವಾಡಿಗಳಿಗೆ ನಿರಂತರವಾಗಿ ಭೇಟಿ ನೀಡಿ, ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತಂತೆ ಸ್ಥಳೀಯ ಸಂಸ್ಥೆಯ ಅಽಕಾರಿಗಳು, ತಹಸೀಲ್ದಾರ್‌ಗಳು ಕ್ರಮ ವಹಿಸಬೇಕು ಎಂದರು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪಾವತಿಸುವ ಸಹಾಯಧನವನ್ನು ನಿಗದಿತ ಅವಽಯಲ್ಲಿ ಪಾವತಿಸುವಂತೆ ಮತ್ತು ಬ್ಯಾಂಕ್ ಖಾತೆಯಲ್ಲಿ ಕಂಡು ಬರುವ ಸಮಸ್ಯೆಗಳ ಕುರಿತಂತೆ ಲೀಡ್ ಬ್ಯಾಂಕ್ ಅಽಕಾರಿಗಳನ್ನು ಸಂಪರ್ಕಿಸಿ ವಿಶೇಷ ಕ್ಯಾಂಪ್ ಆಯೋಜಿಸಿ ಬ್ಯಾಂಕಿಂಗ್ ಕುರಿತ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.
ಜಿಪಂ ಸಿಇಒ ಈಶ್ವರ ಕಾಂದೂ, ಜಿಲ್ಲಾ ಆರ್‌ಸಿಎಚ್. ಅಽಕಾರಿ ಡಾ.ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರುಪಾಕ್ಷ ಗೌಡ ಪಾಟೀಲ್