ಅಪರಾಧಿಗೆ ಕಠಿಣ ಜೈಲು ಶಿಕ್ಷೆ

jail-prison-1
Published on

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಅಪರಾಧಿ ಚೀಮೇನಿ ಮಾಣಿಯೋಟ್ ನಿವಾಸಿ ಪ್ರತೀಶ್ ಎ.ವಿ.(44) ಎಂಬಾತನಿಗೆ ಹೊಸದುರ್ಗ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಪಿ.ಎಂ. 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 2023ರ ಜನವರಿಯಲ್ಲಿ ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಗೆ ನುಗ್ಗಿ 12ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನನ್ವಯ ಚೀಮೇನಿ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net