ಕಠಿಣ ಶಿಕ್ಷೆಯ ಭಯವಿಲ್ಲದೆ ಕೃತ್ಯ

22-DVD-1
Published on

ದೇವದುರ್ಗ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆ ಖಂಡಿಸಿ ಮಿನಿವಿಧಾನಸೌಧ ಮುಂದೆ ದಲಿತ ಪ್ರಗತಿಪರ ಸಂಘಟನೆಗಳಿಂದ ಸೋಮವಾರ ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರ ಮೇಲೆ ದಿನೇ ದಿನೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರದಂಥ ಘಟನೆಗಳು ಹೆಚ್ಚುತ್ತಿವೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಎನ್ನುವ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಯಾಗಿದೆ. ಇಂಥ ಕೃತ್ಯಗಳಿಗೆ ಕಠಿಣ ಶಿಕ್ಷೆ ಇಲ್ಲದಿರುವುದೇ ಸಮಾಜಘಾತಕರಿಗೆ ಭಯವಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕೊಲೆಗಾರನಿಗೆ ಗಲ್ಲುಶಿಕ್ಷೆ ವಿಧಿಸಬೇಕು. ನೇಹಾ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಪಡಿಸಿ ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net