ಮಾದಕ ವಸ್ತು ಬಳಸಿದರೆ ಕಠಿಣ ಶಿಕ್ಷೆ

poshan
ಪೋಷನ್ ಪಕ್ವಾಡ್ ಕಾರ್ಯಕ್ರಮವನ್ನು ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಆರ್.ಯೋಗೀಶ್ ಉದ್ಘಾಟಿಸಿ ಮಾತನಾಡಿದರು.
Published on

ಬ್ರಹ್ಮಾವರ: ಮಾದಕ ವಸ್ತು ಬೆಳೆಯುವುದು, ಸೇವಿಸುವುದು ಮತ್ತು ಮಾರಾಟ ಮಾಡುವುದು ಜೀವಿತಾವಧಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಆರ್.ಯೋಗೀಶ್ ಹೇಳಿದರು.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಪೋಷಣ್ ಪಕ್ವಾಡ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ನಿರೂಪಣಾಧಿಕಾರಿ ಅನುರಾಧಾ ಹಾದಿಮನಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಹಲವಾರು ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಭಾ ಕಾರ್ಯಕ್ರಮ ಬಳಿಕ ವಿದ್ಯಾರ್ಥಿಗಳು ಬ್ರಹ್ಮಾವರ ಪೊಲೀಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಭೇಟಿ ನೀಡಿದರು. ಠಾಣಾಧಿಕಾರಿ ಸುದರ್ಶನ ದೊಡ್ಡಮನಿ, ಉಪ ಪ್ರಾಂಶುಪಾಲೆ ಉಮಾ ಪಿ., ದೈಹಿಕ ಶಿಕ್ಷಕ ಜಗದೀಶ್ ಕೆ., ಕಾರ್ಯಕ್ರಮ ಸಂಯೋಜಕ ಜಯ ಕುಮಾರ್ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಜಯಲಕ್ಷ್ಮೀ ಶೆಟ್ಟಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಭಾಗೀರಥಿ ಆಚಾರ್ಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net