ಸೇವಾಲಾಲ್ ಜಯಂತ್ಯುತ್ಸವ 29ರಂದು

Sevalal
Published on

ಲಕ್ಷ್ಮೇಶ್ವರ: ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಫೆ. 29ರಂದು ಸೋಮೇಶ್ವರ ದೇವಸ್ಥಾನದ ತೇರಿನ ಮನೆ ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಂಜಾರ ಸಮಾಜದವರೊಂದಿಗೆ ಜರುಗಿದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಫೆ. 29ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಪಂಪ ವೃತ್ತದಿಂದ ಪೂರ್ಣಕುಂಭ, ಕಲಾ ತಂಡದೊಂದಿಗೆ ಪ್ರಮುಖ ಮಾರ್ಗದಲ್ಲಿ ಸೇವಾಲಾಲ್ ಮಹಾರಾಜರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಸಕಲ ವಾದ್ಯ ವೈಭವಗಳೊಂದಿಗೆ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಸಮಾಜದ ಸಾವಿರಾರು ಮಂದಿ ಸಾಂಪ್ರದಾಯಿಕ ಉಡುಪು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಮೆರವಣಿಗೆ ಬಳಿಕ ಶ್ರೀ ಸೋಮೇಶ್ವರ ದೇವಸ್ಥಾನದ ತೇರಿನ ಮನೆ ಆವರಣದಲ್ಲಿ ವಿವಿಧ ಮಠಾಧೀಶರ ಸಾನ್ನಿಧ್ಯ, ರಾಜಕಾರಣಿಗಳು, ಹಿರಿಯರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಅದೇ ದಿನ ಪಟ್ಟಣದ ಪ್ರವಾಸಿ ಮಂದಿರದ ಹಿಂಭಾಗದ ನಿವೇಶನದಲ್ಲಿ ಬಂಜಾರ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದರು.
ದೀಪಕ ಲಮಾಣಿ, ಗುರಪ್ಪ ಲಮಾಣಿ, ಶಿವಣ್ಣ ಲಮಾಣಿ, ಮಾನಪ್ಪ ನಾಯಕ, ದೇವಪ್ಪ ಲಮಾಣಿ, ಜಾನು ಲಮಾಣಿ, ಶಿವಣ್ಣ ಲಮಾಣಿ, ಶೇಖಪ್ಪ ಲಮಾಣಿ, ಸೋಮು ಲಮಾಣಿ, ಈರಣ್ಣ ಚವ್ಹಾಣ, ಥಾವರಪ್ಪ ಲಮಾಣಿ, ಪರಮೇಶ ಲಮಾಣಿ, ಲಕ್ಷ್ಮಣ ಲಮಾಣಿ, ಮಹೇಶ ಲಮಾಣಿ, ದುಂಡಪ್ಪ ಲಮಾಣಿ, ಈಶಪ್ಪ ಲಮಾಣಿ, ಸೋಮರೆಡ್ಡಿ ಲಮಾಣಿ, ಗಣೇಶ ಲಮಾಣಿ, ಪುಂಡಲೀಕ ಲಮಾಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net