ಚರಂಡಿ ಮಧ್ಯ ವಿದ್ಯುತ್ ಕಂಬ

Hiremalluru
Published on

ಶಿಗ್ಗಾಂವಿ: ತಾಲೂಕಿನ ಹಿರೇಮಲ್ಲೂರ ಗ್ರಾಮದ ವಾರ್ಡ್ ನಂ.1ರ ಚರಂಡಿಯಲ್ಲಿ ವಿದ್ಯುತ್ ಕಂಬ ಅಳವಡಿಸಲಾಗಿದೆ. ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ.

ಕೆಲವು ವರ್ಷಗಳ ಹಿಂದೆ ಗುತ್ತಿಗೆದಾರರು ಹಳೆಯ ವಿದ್ಯುತ್ ಕಂಬ ಬದಲಿಸಿ ಹೊಸ ಕಂಬವನ್ನು ಅಳವಡಿಸಿದ್ದಾರೆ. ಮಳೆಗಾಲದಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್, ತ್ಯಾಜ್ಯವು ಕಂಬಕ್ಕೆ ಅಡ್ಡವಾಗುವುದರಿಂದ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ರಸ್ತೆಯೂ ಹಾಳಾಗುತ್ತಿದೆ.

ಕಂಬವನ್ನು ಸ್ಥಳಾಂತರಿಸಲು ಸ್ಥಳೀಯ ಗ್ರಾಮ ಪಂಚಾಯಿತಿಗೆ, ಗ್ರಾಮದ ಸದಸ್ಯರಿಗೆ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದು ಅಲ್ಲಿನ ನಿವಾಸಿಗಳು ದೂರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net