

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅವರು ಫೆ. 19ರಿಂದ 21ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 19ರಂದು ಬೆಳಗ್ಗೆ 11 ಗಂಟೆಗೆ ಹು-ಧಾ ಪೂರ್ವ ಹಾಗೂ ಸೆಂಟ್ರಲ್ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳಿಗೆ ಭೇಟಿ ನಂತರ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ಕಾಮಗಾರಿ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸಾರ್ವಜನಿಕರ ಕುಂದುಕೊರತೆ ಆಲಿಸುವರು. ಮಧ್ಯಾಹ್ನ 2.30 ಗಂಟೆಗೆ ಅಣ್ಣಿಗೇರಿ ಮಾರ್ಗವಾಗಿ ನವಲಗುಂದ ಹಾಗೂ ನರಗುಂದ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳಿಗೆ ಭೇಟಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ಕಾಮಗಾರಿ, ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸಾರ್ವಜನಿಕರ ಕುಂದುಕೊರತೆ ಆಲಿಸುವುವರು. 20ರಂದು ಬೆಳಗ್ಗೆ 10 ಗಂಟೆಗೆ ಹು-ಧಾ ಪಶ್ಚಿಮ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳಿಗೆ ಭೇಟಿ, ಮಧ್ಯಾಹ್ನ 3.30 ಗಂಟೆಗೆ ಕಲಘಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡುವರು. 21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸಿ ಕೊಳಗೇರಿ ನಿವಾಸಿಗಳ ಕುಂದುಕೊರತೆ, ಹುಬ್ಬಳ್ಳಿಯ ಗಿರಣಿ ಚಾಳ ಕೊಳಚೆ ಪ್ರದೇಶದ ಬಗ್ಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.