ಚರಂಡಿ ಹೂಳು ತೆರವಿಗೆ ಕ್ರಮ ವಹಿಸಿ

21SND-02
Published on

ಸಿಂಧನೂರು: ನಗರದ 31 ವಾರ್ಡ್‌ಗಳಲ್ಲಿ ಚರಂಡಿಗಳಲ್ಲಿ ಹೂಳು, ತ್ಯಾಜ್ಯ ತುಂಬಿದ್ದು, ಮುಳ್ಳು ಕಂಟಿಗಳು ಬೆಳೆದಿವೆ. ಕೂಡಲೇ ಹೂಳೆತ್ತಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿ ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ (ಎಚ್.ಶಿವರಾಮಗೌಡ ಬಣ) ಸೋಮವಾರ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ಸುರಿದ ಮಳೆಯಿಂದ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ವಾಸ ಮಾಡಲು ಪರದಾಡಬೇಕಾಯಿತು. ಅಲ್ಲದೇ ಅನಾರೋಗ್ಯ ಸಮಸ್ಯೆ ಎದುರಿಸಿದರು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆ, ಮನೆಗಳಿಗೆ ನುಗ್ಗುತ್ತಿದೆ. ಹೀಗಾಗಿ ರಸ್ತೆಗಳು ರಾಡಿಮಯವಾಗುತ್ತಿವೆ ಎಂದು ದೂರಿದರು.

ತಹಸಿಲ್ ಕಾರ್ಯಾಲಯದ ಮುಂಭಾಗದಲ್ಲಿರುವ ಬಸ್ ಶೆಲ್ಟರ್ ಬಳಿ ಗಲೀಜು ವಾತಾವರಣ ಇದೆ. ಪ್ರಯಾಣಿಕರು ಕುಳಿತುಕೊಳ್ಳಲು ಮುಜುಗರ ಅನುಭವಿಸುವಂತಾಗಿದ್ದು, ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಲಾಯಿತು. ಪ್ರಮುಖರಾದ ಶ್ರೀಕಾಂತರೆಡ್ಡಿ, ಮಹಿಬೂಬಸಾಬ್, ವಿಘ್ನೇಶ, ರಾಘವೇಂದ್ರ ಹನುಮೇಶ ಗೀತಾಕ್ಯಾಂಪ್, ರವಿಕುಮಾರ್ ಎಚ್. ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net