

ಹೆಬ್ರಿ: ಇತ್ತೀಚಿನ ದಿನಗಳಲ್ಲಿ ಟೈಲರಿಂಗ್ ಮಾಡಿಕೊಂಡರೆ ಉತ್ತಮ ಆದಾಯ ಗಳಿಸಬಹುದು. ಇದರ ಜತೆಗೆ ಸುಖಕರ ಜೀವನ ನಡೆಸಬಹುದು. ಯೋಜನೆಯ ಆಶಯದಂತೆ ಜನರ ಜೀವನ ಕಲ್ಯಾಣವಾಗಲಿ ಎಂದು ಚಾರ ವಲಯ ಜನಜಾಗೃತಿ ಅಧ್ಯಕ್ಷ ಚಾರ ವಾದಿರಾಜ ಶೆಟ್ಟಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಹೆಬ್ರಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಚಾರ ಭಜನಾ ಮಂಡಳಿ ಭವನದಲ್ಲಿ ಹೊಲಿಗೆ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಮಾತನಾಡಿ, ಮಹಿಳೆಯರಿಗಾಗಿ ಇದೊಂದು ಸ್ವಉದ್ಯೋಗಕ್ಕೆ ಅವಕಾಶ ಮಾಡಿ ಕೊಟ್ಟಿದೆ. ಉತ್ತಮ ರೀತಿಯಲ್ಲಿ ಬಳಸಿಕೊಂಡು ಮುಂದಕ್ಕೆ ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದರು.
ಚಾರ ವಲಯ ಅಧ್ಯಕ್ಷೆ ಜ್ಯೋತಿ, ಭಜನಾ ಮಂಡಳಿ ಅಧ್ಯಕ್ಷ ರಮೇಶ್, ಟೈಲರಿಂಗ್ ಶಿಕ್ಷಕಿ ಸುಜಾತ, ಶೌರ್ಯ ವಿಪತ್ತು ಘಟಕ ಅಧ್ಯಕ್ಷ ಚಂದ್ರ ನಾಯ್ಕ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ರೇವತಿ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಲತಾ ವಂದಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.