ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ

Sexual assault, love cheating
Published on

ಮೈಸೂರು: ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಯುವತಿಯೊಬ್ಬಳು ಮನೆ ಮಾಲೀಕನ ಮಗನ ವಿರುದ್ಧ ಕೆ.ಆರ್. ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸುಣ್ಣದಕೇರಿ ನಿವಾಸಿ ಮಂಜುನಾಥ್ ವಿರುದ್ಧ ಯುವತಿ ದೂರು ನೀಡಿದ್ದಾಳೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ನನ್ನನ್ನು ಮಂಜುನಾಥ್ ಸಂತೈಸುವ ನೆಪದಲ್ಲಿ ಮನೆಗೆ ಬರುತ್ತಿದ್ದ. ನಂತರ ವಿವಾಹವಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ನಾನು ಗರ್ಭವತಿಯಾದ ನಂತರ ಬಲವಂತವಾಗಿ ಖಾಸಗಿ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಿದ್ದಾನೆ.

ಅಲ್ಲದೆ ನನ್ನ ವಿವಾಹಕ್ಕೆ ಕೂಡಿಟ್ಟಿದ್ದ 1.20 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net