ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Court
Published on

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 42 ವರ್ಷದ ಚನ್ನವೀರೇಶ ಬಸವರಾಜ ಎಮ್ಮಿ ಎಂಬ ಅಪರಾಧಿಗೆ 20 ವರ್ಷ ಶಿಕ್ಷೆ ಹಾಗೂ 11 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ(ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.

ರಾಣೆಬೆನ್ನೂರ ಶಹರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು. ಸಿಪಿಐ ಎಂ.ಐ. ಗೌಡಪ್ಪಗೌಡರ ತನಿಖೆ ಮಾಡಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಯಾಧೀಶರು ಪ್ರಕರಣದಲ್ಲಿ ಅಪರಾಧಿಯಾದ ಚನ್ನವೀರೇಶ ಬಸವರಾಜ ಎಮ್ಮಿ ವಿರುದ್ಧದ ಅಪಾದನೆಗಳಾದ ಭಾ.ದಂ.ಸಂ ಕಲಂ 376(ಎಬಿ)ಯಡಿ 20 ವರ್ಷಗಳ ಶಿಕ್ಷೆ ಹಾಗೂ ವಿವಿಧ ಕಲಂಗಳಡಿ 11 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ಥೆಗೆ ಸರ್ಕಾರದ ನೊಂದವರ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಲಾಗಿದೆ ಎಂದು ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಗೆಜ್ಜಿಹಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net