ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುವಕನಿಗೆ 20 ವರ್ಷ ಶಿಕ್ಷೆ

dist Court building
ಶಿವಮೊಗ್ಗ ನ್ಯಾಯಾಲಯ
Published on

ಶಿವಮೊಗ್ಗ: ಹೊಸನಗರ ತಾಲೂಕಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಶಿವಮೊಗ್ಗದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1(ಪೋಕ್ಸೊ)ರ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ ನಾಲ್ಕು ತಿಂಗಳ ಸಾಧಾ ಶಿಕ್ಷೆ ವಿಧಿಸಿ ಆದೇಶಿಸಿದೆ.

ಹೊಸನಗರ ತಾಲೂಕಿನ 25 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 2022ರಲ್ಲಿ ಹೊಸನಗರ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ನೊಂದ ಬಾಲಕಿ ಹೊಸನಗರ ಠಾಣೆಗೆ ದೂರು ನೀಡಿದ್ದಳು. ಅಂದಿನ ತನಿಖಾಧಿಕಾರಿಯಾಗಿದ್ದ ಹೊಸನಗರ ಇನ್‌ಸ್ಪೆಕ್ಟರ್ ಬಿ.ಸಿ.ಗಿರೀಶ್ ಯುವಕನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಲತಾ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net