ಮಲಗಿದ್ದ ವೃದ್ದೆಯ ಮೇಲೆ ಲೈಂಗಿಕ ದೌರ್ಜನ್ಯ

desk 1
Published on

ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಆಸ್ಪತ್ರೆ ಸಿಬ್ಬಂದಿ

ಚಿಂತಾಮಣಿ : ನಗರದ ಸಾರ್ವಜನಿಕ ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಪಕ್ಕದಲ್ಲಿನ ಶೆಡ್‌ನಲ್ಲಿ ಮಲಗಿದ್ದ 65 ವರ್ಷದ ವೃದ್ಧೆಯ ಮೇಲೆ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಆಸ್ಪತ್ರೆ ಆಡಳಿತಾಧಿಕಾರಿ ನೀಡಿದ ದೂರಿನ ಮೇಲೆ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ರ್ಇಾನ್ (24) ಆರೋಪಿ ಎಂದು ಗುರುತಿಸಲಾಗಿದೆ. ಸಂತ್ರಸ್ತ ಮಹಿಳೆ ತಾಲೂಕಿನ ಗ್ರಾಮವೊಂದರ ನಿವಾಸಿ ಎನ್ನಲಾಗಿದೆ.
ಮಂಗಳವಾರ ರಾತ್ರಿ ಆಸ್ಪತ್ರೆಗೆ ಹೊರರೋಗಿಯಾಗಿ ಚೀಟಿ ಪಡೆದುಕೊಂಡು ಚಿಕಿತ್ಸೆ ಪಡೆದು ನಂತರ ಮನೆಗೆ ವಾಪಸ್ಸು ಹೋಗುವಾಗ ಸಾರ್ವಜನಿಕ ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಪಕ್ಕದಲ್ಲಿನ ಶೆಡ್‌ನಲ್ಲಿ ಮಲಗಿದ್ದ ವೃದ್ಧೆಯ ಮೇಲೆ ರ್ಇಾನ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಷಯ ತಿಳಿದು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳಾದ ರಂಜಿತ್, ವಿರೇಂದ್ರ ಮತ್ತು ಶ್ರೀನಿವಾಸ್ ಎಂಬುವರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜತೆಗೆ ಆಸ್ಪತ್ರೆಯ ಕರ್ತವ್ಯನಿರತ ವೈದ್ಯೆ ಡಾ. ವಾಣಿ ಅವರಿಗೂ ವಿಷಯ ತಿಳಿಸಿದ್ದಾರೆ.

ಕೂಡಲೇ ವೈದ್ಯರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಆಡಳಿತಾಧಿಕಾರಿ ಡಾ.ಸಂತೋಷ್ ಗಮನಕ್ಕೆ ತಂದಿದ್ದಾರೆ, ಡಾ.ಸಂತೋಷ್ ನೀಡಿದ ದೂರಿನ ಮೇಲೆ ನಗರಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net