ಲೈಂಗಿಕ ದೌರ್ಜನ್ಯ ಎಸಗಿದ್ದವನ ಬಂಧನ

crime
Published on

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ಯವಯಸ್ಕನೊಬ್ಬನನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ತಿಳಿಸಿದರು.

ನಗರದ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ. 18ರಂದು ನೊಂದ ಅಪ್ರಾಪ್ತೆಯು ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. 2023ರಲ್ಲಿ ತಾನು ಅಪ್ರಪ್ತೆಯಿದ್ದಾಗ ಚಾಲುಕ್ಯ ನಗರದ ನಿವಾಸಿ ಪ್ರಕಾಶ ಕಂಜರಭಾಟ್ (49) ಎಂಬಾತ ತನ್ನ ತಂದೆ-ತಾಯಿಯನ್ನು ಕೊಲೆ ಮಾಡುವ ಜೀವ ಬೆದರಿಕೆ ಹಾಕಿ ತನ್ನನ್ನು ಮನೆಗೆ ಕರೆಸಿಕೊಂಡು ಒತ್ತಾಯದ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದರು. ಈ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದರು.

ಈಗಾಗಲೇ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಇನ್ನೂ ಹಲವರಿಗೆ ಮೋಸ ಮಾಡಿರುವ ಆರೋಪಗಳಿವೆ. ಈ ಬಗ್ಗೆ ತನಿಖೆ ಮಾಡಲಾಗುವುದು. ಅಲ್ಲದೇ ಯಾರೇ ಈತನಿಂದ ಮೋಸ ಹೋಗಿದ್ದಲ್ಲಿ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಿಸಬೇಕೆಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net