

ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪಂಚಾಯಿತಿ ಸದಸ್ಯನ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಮತ್ತು ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಪಂ ಸದಸ್ಯ ಸಂತೋಷ್ ಪುತ್ರನ್ (46) ಎಂಬಾತ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಮೇ 29ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.