

ಕಾಸರಗೋಡು: ವಿವಾಹದ ಭರವಸೆ ನೀಡಿ ಹದಿನೇಳರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೆರ್ಕಳ ಸಂತೋಷ್‌ನಗರ ನಿವಾಸಿ ಮಹಮ್ಮದ್ ಅಜ್ಮಲ್(24) ಎಂಬಾತನನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ 17ರ ಹರೆಯದ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ, ಆಕೆಯನ್ನು ವಿವಾಹವಾಗುವುದಾಗಿ ನಂಬಿಸಿ ಕಳೆದ ಕೆಲವು ಸಮಯದಿಂದ ಲೈಂಗಿಕ ಸಂಪರ್ಕ ಬೆಳೆಸಿದ್ದನು. ಈ ಮಧ್ಯೆ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗುತ್ತಿದ್ದಂತೆ ಲೈಂಗಿಕ ಕಿರುಕುಳ ಪ್ರಕರಣ ಬಯಲಾಗಿದೆ. ವಿದ್ಯಾನಗರ ಠಾಣೆ ಇನ್‌ಸ್ಪೆಕ್ಟರ್ ಯು.ಪಿ.ವಿಪಿನ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದೆ.