

ಕಾಸರಗೋಡು: ಹದಿಮೂರರರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿ ಕುತ್ತಿಕ್ಕೋಲ್ ವಳವಿಲ್ ವಳಪ್ಪಿಲ್ ನಿವಾಸಿ ಪಿ.ಬಾಬು ಎಂಬಾತನಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯ ಎಂಟು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 21 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಒಂದು ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸುವಂತೆ ಸೂಚಿಸಲಾಗಿದೆ. 2023ರ ಮಾರ್ಚ್ನಲ್ಲಿ ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೊಲೀಸರು ಬಾಬು ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದರು.