ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...!!

Shankitha-1
Published on

ಉಡುಪಿಯಲ್ಲಿ ನಡೆದಿದೆ ಹೀನಾಯ ಕೃತ್ಯ

ಸಿಸಿ ಕ್ಯಾಮರಾದಲ್ಲಿ ಶಂಕಿತನ ಫೋಟೋ ಪತ್ತೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಐದು ವರ್ಷದ ಬಾಲಕಿಗೆ ಅಪರಿಚಿತ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿದ ಹೀನ ಕೃತ್ಯ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿದ್ದು, ಉಡುಪಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ಮಾಹಿತಿಗೆ ಸಾರ್ವಜನಿಕರಲ್ಲಿ ಮನವಿ

Shankitha-2
ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ಶಂಕಿತನ ಫೋಟೋ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಂದಾಜು 30 ವರ್ಷದ ಶಂಕಿತ ಆರೋಪಿಯ ಫೋಟೋ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಪೊಲೀಸರು ಶಂಕಿತನ ಫೋಟೋ ಬಿಡುಗಡೆ ಮಾಡಿದ್ದಾರೆ. ಆತನ ಬಗ್ಗೆ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್​ ಠಾಣೆಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಕಂಟ್ರೋಲ್​ ರೂಮ್​- 9480805400. ಮಹಿಳಾ ಠಾಣೆ ಪೊಲೀಸ್​ ನಿರೀಕ್ಷಕರು- 9480805430. ಮಹಿಳಾ ಠಾಣೆ ಪೊಲೀಸ್​ ಉಪನಿರೀಕ್ಷಕರು- 8277988949. ಮಹಿಳಾ ಠಾಣೆ ದೂ.ಸಂ.- 0820-2525599 ಈ ನಂಬರ್​ಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತ್ವರಿತ ಕ್ರಮಕ್ಕೆ ಸಚಿವೆ ಹೆಬ್ಬಾಳ್ಕರ್​ ಸೂಚನೆ

Laxmi
ಬಾಲಕಿಯ ಮೇಲೆ ನಡೆದ ಲೈಂಗಿಕ ಕಿರುಕುಳದ ಘಟನೆಯ ಮಾಹಿತಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಖಂಡಿಸಿದ್ದಾರೆ. ಅಪಘಾತದಿಂದ ಗಾಯಗೊಂಡು ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ಘಟನೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠರಿಂದ ವಿವರ ಪಡೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ದುಷ್ಕೃತ್ಯ ಎಸಗಿದವರನ್ನು ತ್ವರಿತವಾಗಿ ಪತ್ತೆ ಹಚ್ಚಿ ಬಂಧಿಸಬೇಕು. ಸಂತ್ರಸ್ತ ಬಾಲಕಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಬೇಕು ಎಂದು ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net