ಇಟಿಗಟ್ಟಿಯಲ್ಲಿ ಎಸ್​ಇಝುಡ್ : ಗೆಜೆಟ್ ಪ್ರಕಟಣೆ

Joshi new 2323232
Published on

ಹುಬ್ಬಳ್ಳಿ : ಇಟ್ಟಿಗಟ್ಟಿಯಲ್ಲಿ ಏಕಸ್ ಇನ್​ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೖೆವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಇಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್​ನಲ್ಲಿ ಪ್ರಕಟಿಸಿದೆ. ಹುಬ್ಬಳ್ಳಿ -ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಇಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಹುಬ್ಬಳ್ಳಿಯನ್ನು ಜಾಗತಿಕವಾಗಿ ಇಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆ ಇದಾಗಲಿದೆ. 2025-26ರಲ್ಲಿ ಮೊದಲ ಹಂತದ ಕಾರ್ಯುಚರಣೆ ಆರಂಭವಾಗಲಿದೆ ಎಂದರು.

ಕೈಗಾರಿಕೆಗಳಿಗೆ ಜಾಗ ನೀಡುವ ನಿಯಮಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಿದರೆ ಸರ್ಕಾರಕ್ಕೆ ಭವಿಷ್ಯದಲ್ಲಿ ದೊಡ್ಡ ಆದಾಯ ಬರುತ್ತದೆ. ಇದರೊಂದಿಗೆ ಉದೊ್ಯೕಗಗಳೂ ಸೃಷ್ಟಿಯಾಗುತ್ತವೆ ಎಂದರು.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಕುರಿತು ಪ್ರತಿಕ್ರಿಯಿಸಿದ ಜೋಶಿ, ಈಗಾಗಲೇ ಡಿಪಿಆರ್ ಆಗಿದೆ. ಇದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ. ಹಲವು ಟ್ರಿಬ್ಯುನಲ್, ವನ್ಯಜೀವಿ ಮಂಡಳಿಯಿಂದ ಪರವಾನಗಿ ಬೇಕಿದೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net