

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ ನೀಟ್ ಯುಜಿ, ಪಿಜಿ ಮತ್ತು ಯುಜಿಸಿ ನೆಟ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಭಾರತ ವಿದ್ಯಾರ್ಥಿ -ೆಡರೇಷನ್ (ಎಸ್‌ಎ-ïಐ) ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜ್ಯುಬಿಲಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಽಕಾರಿ ಕಚೇರಿ ಎದುರು ಸಮಾವೇಶಗೊಂಡು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನು ರದ್ದುಗೊಳಿಸಿ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ನೀಟ್ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪಿಎಚ್.ಡಿ ಪ್ರವೇಶಾತಿಗೆ ನೆಟ್ ಕಡ್ಡಾಯಗೊಳಿಸಬಾರದು. ವಿಶ್ವವಿದ್ಯಾಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ದಾಳಿಗಳನ್ನು ತಡೆಯಬೇಕು. ಸಾರ್ವತ್ರಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಎಸ್‌ಎ-ïಐ ಸಂಘಟನೆಯ ಜಿಲ್ಲಾಧ್ಯಕ್ಷ ನಾಗರಾಜ ಇಟಗಿ, ಸದಸ್ಯರಾದ ಬಸವರಾಜ ಎಸ್., ದೇವರಾಜ ಲಮÁಣಿ, ಗುರುಬಸವರಾಜ ಬಾಗಳಿ, ಅಶ್ವಿನಿ ಎಲ್.ಕೆ., ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.