

ಹರಪನಹಳ್ಳಿ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ ಹಿಂದುಳಿದ ತಾಲೂಕುಗಳಲ್ಲಿ ಒಂದಾಗಿದೆ. ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಬಹುತೇಕರು ಬಡವರು, ಹಿಂದುಳಿದ ರೈತ, ಕೂಲಿ ಕಾರ್ಮಿಕರ ಮಕ್ಕಳಾಗಿದ್ದಾರೆ. ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕೆಂದು ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ವೆಂಕಟೇಶ ಆಗ್ರಹಿಸಿದರು.
ಹಾಸ್ಟೆಲ್‌ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಗುಣಮಟ್ಟದ ಆಹಾರವನ್ನು ನೀಡಬೇಕು. ತಾಲೂಕಿನ ಬಹುತೇಕ ಹಾಸ್ಟೆಲ್‌ಗಳಲ್ಲಿ ಖಾಯಂ ನಿಲಯಪಾಲಕರಿಲ್ಲ. ಒಬ್ಬ ವಾರ್ಡ್‌ನ್ ಎರಡ್ಮೂರು ಹಾಸ್ಟೆಲ್‌ಗಳನ್ನು ನಿರ್ವಹಿಸುತ್ತಿದ್ದಾರೆ. ಇದರಿಂದ ಒತ್ತಡದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಆಗುತ್ತಿಲ್ಲ ಎಂದು ದೂರಿದರು. ತಹಸಿಲ್ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಚಂದ್ರಮೋಹನ್‌ಗೆ ಮನವಿ ಸಲ್ಲಿಸಿದರು.
ಎಸ್‌ಎಫ್‌ಐ ತಾಲೂಕು ಕಾರ್ಯದರ್ಶಿ ವೆಂಕಿ, ಪ್ರಮುಖರಾದ ಅಜಾದ್, ಲೋಕೇಶ್ ದೊಡ್ಡಮನಿ, ಸಂಜುನಾಯ್ಕ, ಗೋಣಿ, ಬಸವರಾಜ್