

ಮಂಗಳೂರು: ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ 19 ವರ್ಷದೊಳಗಿನ ಬಾಲಕರ ವಾಲಿಬಾಲ್ ತಂಡ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಎಸ್‌ಜಿಎಫ್‌ಐ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ವಿದ್ಯಾ ಭಾರತಿ ತಂಡವನ್ನು ಪ್ರತಿನಿಧಿಸಿದ್ದಾರೆ. ತಂಡದ ಸದಸ್ಯರನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲ ಪೃಥ್ವಿರಾಜ್, ಶಕ್ತಿ ವಸತಿ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.