ಬೆಳಗಾಂ ಸಕ್ಕರೆ ಕಾರ್ಖಾನೆಗೆ ಗೋಲ್ಡನ್ ಪ್ರಶಸ್ತಿ

IMG-20240823-WA0022.jpg
Published on

ಬೆಳಗಾವಿ: ತಮಿಳುನಾಡಿನ ಚನ್ನೈನ ದಕ್ಷಿಣ ಭಾರತ ಕಬ್ಬು ಮತ್ತು ಸಕ್ಕರೆ ತಂತ್ರಜ್ಞರ ಸಂಸ್ಥೆಯು ಬೆಳಗಾಂ ಶುಗರ್ಸ ಪ್ರೈವೇಟ್ ಲಿಮಿಟೆಡ ಸಕ್ಕರೆ ಕಾರ್ಖಾನೆಗೆ 2023-24 ನೇ ಸಾಲಿನ ಕರ್ನಾಟಕ ವಲಯದ ಗೋಲ್ಡನ್ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ 53ನೇ ವಾರ್ಷಿಕ ಸಮಾವೇಶದಲ್ಲಿ ಬೆಳಗಾಂ ಶುಗರ್ಸ ಪ್ರೈವೇಟ್ ಲಿಮಿಟೆಡ್ ಹಿರಿಯ ಅಧಿಕಾರಿಗಳು ಪ್ರಶಸ್ತಿಯನ್ನು ಸ್ವೀಕರಿಸಿದರು. ಸಕ್ಕರೆ ಉದ್ಯಮದ ಕುರಿತು ವಿಶೇಷ ಅಧ್ಯಯನ, ತಾಂತ್ರಿಕತೆ ಅಭಿವೃದ್ದಿ ಹಾಗೂ ವಿವಿದ ವಿಷಯಗಳ ಮಾಹಿತಿ ಶಿಬಿರ ಏರ್ಪಡಿಸುವ ಮೂಲಕ ಸಕ್ಕರೆ ಉದ್ಯಮಕ್ಕೆ ಅತ್ಯಮೂಲ್ಯ ಕೊಡುಗೆ ಮತ್ತು ಪ್ರೋತ್ಸಾಹ ನೀಡುತ್ತಿರುವ ದಕ್ಷಿಣ ಭಾರತ ಕಬ್ಬು ಮತ್ತು ಸಕ್ಕರೆ ತಂತ್ರಜ್ಞರ ಸಂಸ್ಥೆಯು ಪ್ರತಿ ವರ್ಷ ದಕ್ಷಿಣ ಭಾರತದ ಎಲ್ಲ ಖಾಸಗಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳ ಕಾರ್ಯ ನಿರ್ವಹಣೆಯ ಮಾನದಂಡಗಳ ಮೌಲ್ಯಮಾಪನ ಮಾಡಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕಾರ್ಖಾನೆಗಳಿಗೆ ಈ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹಿಸುತ್ತಿದೆ. ಸಕ್ಕರೆ ಕಾರ್ಖಾನೆ ಸಂಸ್ಥಾಪಕ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಏಳ್ಗೆಯತ್ತ ಸಾಧಿಸುತ್ತಿದ್ದು, ಸಕ್ಕರೆ ಕಾರ್ಖಾನೆಯು ತನ್ನ ಕಾರ್ಯಕ್ಷಮತೆಗೆ ತಕ್ಕಂತೆ ಪರ್ಯಾಪ್ತ ಪ್ರಮಾಣದ ಕಬ್ಬನ್ನು ಲಭ್ಯವಾಗಿಸಿಕೊಳ್ಳುವ ದೃಷ್ಟಿಯಿಂದ ತನ್ನ ಕಾರ್ಯಕ್ಷೇತ್ರದಲ್ಲಿ ವಿವಿಧ ಸುಧಾರಿತ ತಳಿಯ ಕಬ್ಬು ಅಭಿವೃದ್ದಿ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಇಳುವರಿ ಪಡೆಯುವ ಕಾರ್ಯಕ್ಕೆ ಪ್ರಶಸ್ತಿ ಲಭಿಸಿದೆ. ಸಂಸ್ಥಾಪಕ ಅಧ್ಯಕ್ಷರಾದ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಕಾರ್ಖಾನೆಯು ಏಳ್ಗೆಯತ್ತ ಸಾಧಿಸುತ್ತಿದ್ದು, ಕಾರ್ಖಾನೆಯ ಚೇರಮನ್ ಮತ್ತು ಸಿ.ಎಫ್.ಓ ರವರಾದ , ಪ್ರದೀಪಕುಮಾರ ಇಂಡಿ ಅವರ ನೇತೃತ್ವದ ಆಡಳಿತ ಮಂಡಳಿಯ ನಿರ್ಣಯ, ರೈತ ಭಾಂದವರ ಸಹಕಾರ, ಅಧಿಕಾರಿಗಳ ಮತ್ತು ಕಾರ್ಮಿಕ ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಕಾರ್ಖಾನೆಯು ಈ ಪ್ರಶಸ್ತಿ ಪಡೆಯಲು ಪಾತ್ರವಾಗಿದೆ ಎಂದು ಬೆಳಗಾಂ ಸಕ್ಕರೆ ಕಾರ್ಖಾನೆಯ ಚೇರಮನ್ ಮತ್ತು ಸಿಎಪ್‌ಓ ಪ್ರದೀಪಕುಮಾರ ಇಂಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

--
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net