ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ನೆರಳಿನ ವ್ಯವಸ್ಥೆ

4 Dwd 2
Published on

ಧಾರವಾಡ: ನಗರದ ಕಿಟೆಲ್ ಕಾಲೇಜ್ ಪಕ್ಕದ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಾರಿಗೆ ಸಂಸ್ಥೆ ನೆರಳಿನ ವ್ಯವಸ್ಥೆ ಮಾಡಿದೆ. ಸಿಬಿಟಿಯನ್ನು ಮೇಲ್ದರ್ಜೆಗೆ ಏರಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಸಾರಿಗೆ ಬಸ್‌ಗಳ ಸಂಚಾರಕ್ಕೆ ಅಲ್ಲಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ಮಾಡಲಾಗಿದೆ. ಸಿಬಿಟಿ ಬಳಿಯ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮರಗಳ ನೆರಳೇ ಆಸರೆಯಾಗಿತ್ತು.
ಬಿಸಿಲಿನ ತಾಪ ಹೆಚ್ಚಾಗಿದ್ದರೂ ನೆರಳಿನ ವ್ಯವಸ್ಥೆ ಇಲ್ಲದ ಕುರಿತು `ವಿಜಯವಾಣಿ' ಇತ್ತೀಚೆಗೆ ವರದಿ ಪ್ರಕಟಿಸಿತ್ತು. ಇತ್ತ ಗಮನ ಹರಿಸಿದ ಸಾರಿಗೆ ಸಂಸ್ಥೆಯ ಅಽಕಾರಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ನೆರಳಿನ ವ್ಯವಸ್ಥೆ ಮಾಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net