

ಹಗರಿಬೊಮ್ಮನಹಳ್ಳಿ: ಪಟ್ಟಣದ ಬೈಪಾಸ್ ರಸ್ತೆಯ ಖಾಜಾ ಗರಿಬ್ ನವಾಜ್ ಶಾದಿ ಮಹಾಲ್‌ನ ನಿರ್ಮಾಣಕ್ಕೆ ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹ್ಮದ್ ಖಾನ್ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.
ಕೆಎಂಎಫ್ ಅಧ್ಯಕ್ಷ ಎಸ್.ಭೀಮಾನಾಯ್ಕ ಮಾತನಾಡಿ, ಶಾದಿ ಮಹಲ್ ನಿರ್ಮಾಣಕ್ಕೆ ಹಿಂದಿನ ಅವಧಿಯಲ್ಲಿ ಶಾಸಕರ ಅನುದಾನದಡಿ 1.5 ಕೋಟಿ ರೂ.ಗಳ ನೀಡಲಾಗಿತ್ತು. ಸಮಿತಿ ಇನ್ನುಳಿದ ಕಾಮಗಾರಿ ಪೂರ್ಣಗೊಳ್ಳಲು 93 ಲಕ್ಷ ರೂ.ಗಳ ಬೇಡಿಕೆ ಇಟ್ಟಿತ್ತು. ಈ ಕುರಿತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈಗ ಅಲ್ಪ ಸಂಖ್ಯಾತರ ಇಲಾಖೆಯಡಿಯಲ್ಲಿ 50 ಲಕ್ಷ ರೂ.ಗಳನ್ನು ಬಿಡುಗಡೆಮಾಡಿದ್ದಾರೆ. ಉಳಿದ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗಿದೆ ಎಂದರು.