

ವಿಜಯವಾಣಿ ಸುದ್ದಿಜಾಲ ಧಾರವಾಡ
ಹಿರಿಯ ಪತ್ರಕರ್ತೆ ಶೈಲಜಾ ಸಿದ್ದಪ್ಪ ಹೂಗಾರ ಅವರು ಪತ್ರಿಕೋದ್ಯಮ ವಿಷಯದಲ್ಲಿ ಮಂಡಿಸಿದ `ಕನ್ನಡ ಪ್ರಮುಖ ದಿನಪತ್ರಿಕೆಗಳ ಭಾನುವಾರದ ಪುರವಣಿಗಳ ಓದುಗರು: ಒಂದು ವಿಶ್ಲೇಷಣಾತ್ಮಕ ಅಧ್ಯಯನ' ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಅವರಿಗೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಜೆ.ಎಂ. ಚಂದುನವರ ಮಾರ್ಗದರ್ಶಕರಾಗಿದ್ದರು.