ಶಕ್ತಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಹೊರೆ ತಪ್ಪಿದೆ

shakti
Published on

ಕುಶಾಲನಗರ:

ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆ ಮೂಲಕ ಮಹಿಳೆಯರು ಹೆಚ್ಚಿನ ಅನುಕೂಲ ಪಡೆದುಕೊಂಡಿದ್ದಾರೆ ಎಂದು ಎಂದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದರು. ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಮೀರಿದ ಹಿನ್ನೆಲೆಯಲ್ಲಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ಬಂದು ಎರಡು ವರ್ಷಗಳಾದ ಹಿನ್ನೆಲೆಯಲ್ಲಿ ಕುಶಾಲನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಧಾರ್ಮಿಕ ಕ್ಷೇತ್ರಗಳಿಗೆ, ಪ್ರವಾಸಕ್ಕೆ ತೆರಳಲು ಉಂಟಾಗುತ್ತಿದ್ದ ಆರ್ಥಿಕ ಹೊರೆ ಈ ಯೋಜನೆಯಿಂದಾಗಿ ತಪ್ಪಿದೆ. ಇದರಿಂದ ಸರ್ಕಾರ ಮತ್ತು ರಸ್ತೆ ಸಾರಿಗೆ ಸಂಸ್ಥೆಗೂ ಕೂಡ ಪರೋಕ್ಷವಾಗಿ ಆರ್ಥಿಕ ಸ್ಥಿತಿ ಪುನಶ್ಚೇತನಗೊಂಡಿದೆ. ಕೊಡಗು ಜಿಲ್ಲೆಯಲ್ಲಿ 511 ಕೋಟಿ ರೂ.ಗಳಷ್ಟು ಹಣ ಸಾರಿಗೆ ಸಂಸ್ಥೆಗೆ ಬಂದಿದೆ ಎಂದರು.

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಇತಿಹಾಸದಲ್ಲಿ ಯಾವುದೇ ಸÀರ್ಕಾರ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಮಹಿಳಾ ಫಲಾನುಭವಿಗಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡಿದ ದೃಷ್ಟಾಂತ ಮತ್ತೊಂದಿಲ್ಲ. ಇಂಥದೊAದು ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ವ್ಯವಸ್ತಿತವಾಗಿ ಜಾರಿಗೆ ತಂದ ಶ್ರೇಯಸ್ಸು ರಾಜ್ಯ ಕಾಂಗ್ರೆಸ್ ನೇತೃತ್ವದ ಸÀರ್ಕಾರದ ಹಿರಿಮೆಯಾಗಿದೆ. ಚಾಲಕರು, ನಿರ್ವಾಹಕರು, ಸಂಸ್ಥೆ ಅಧಿಕಾರಿಗಳ ಸೇವೆ ಕೂಡ ಗಮನಾರ್ಹವಾಗಿದೆ.

ಚಾಲಕರು, ನಿರ್ವಾಹಕರು ಸೇವೆ ಒದಗಿಸಲು ತಾತ್ಸಾರ ತೋರಿಸಬಾರದು ಎಂದು ಹೇಳಿದರು. ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳೊಂದಿಗೆ ಸೇರಿ ನೆರೆದಿದ್ದವರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಒಂದಕ್ಕೆ ಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭ ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ಸೇವೆ ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು.

ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಮಡಿಕೇರಿ ಘಟಕ ಸಾರಿಗೆ ಸಂಸ್ಥೆ ಸಹಾಯಕ ಸಂಚಾರ ಅಧೀಕ್ಷಕ ಎ. ಈರಸಪ್ಪ, ಕೆಡಿಪಿ ಸದಸ್ಯ ಟಿ.ಪಿ. ಹಮೀದ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net