ಅಂತಾರಾಷ್ಟ್ರೀಯ ಟೈಕ್ವಾಂಡೊ ಚಾಂಪಿಯನ್‌ಶಿಪ್‌ಗೆಶಕ್ತಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆ

mng-NAMITH P C
Published on

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಹಾಗೂ ಶಕ್ತಿ ವಸತಿ ಶಾಲೆಯ 9ನೇ
ತರಗತಿಯ ವಿದ್ಯಾರ್ಥಿ ನಮಿತ್ ಪಿ.ಸಿ.ಇವರು ಆ.17 ರಿಂದ 23ರ ವರೆಗೆ ಮಲೇಷಿಯಾದಲ್ಲಿ ನಡೆಯುವ ಅಂತರಾಷ್ಟ್ರೀಯ ಟೈಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಕೃಷ್ಣ ನಾಯಕ್ ಅವರು ತರಬೇತುದಾರರಾಗಿದ್ದಾರೆ. ವಿದ್ಯಾರ್ಥಿಗಳನ್ನು
ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲೆ ದಿವ್ಯಜ್ಯೋತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net