

ಮಂಗಳೂರು : ವಿದ್ಯಾರ್ಥಿಗಳಿಗೆ ಪೋಷಕರು ಒತ್ತಡ ಹಾಕಬಾರದು. ಆಸಕ್ತಿಯ ವಿಷಯವನ್ನು ಕಲಿಯಲು ಬಿಡಬೇಕು. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿದಾಗ ಮಾತ್ರ ಸಂಸ್ಕಾರಯುತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೈಕೋರ್ಟ್‌ನ ವಕೀಲ ಡಾ.ಅರುಣ್ ಶ್ಯಾಮ್ ಹೇಳಿದರು.
ಶಕ್ತಿನಗರದ ಶಕ್ತಿ ವಸತಿ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಎನ್‌ಐಟಿಕೆ ಸುರತ್ಕಲ್‌ನ ಪ್ರಾಧ್ಯಾಪಕ ಡಾ. ಉದಯಕುಮಾರ್ ಮಾತನಾಡಿ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ
ಓದುವ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆ ಇರುವ ಸಂಸ್ಕಾರದ ಭಾವನೆಗೆ ಶ್ಲಾಘನೀಯ .ಪೋಷಕರು ವಿದ್ಯಾರ್ಥಿಗಳಿಗೆ ಆಹಾರದ ವಿಷಯದಲ್ಲಿ ಜಾಗೃತಿ ಮೂಡಿಸಬೇಕು. ಅವರು ಜಂಕ್ ಫುಡ್‌ಗೆ ಆಸಕ್ತಿ ತೋರಿಸುತ್ತಿದ್ದರೆ ಅವರಿಗೆ ತಿಳಿ ಹೇಳಿ ದೂರ ಮಾಡಬೇಕು ಎಂದರು.
ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಅಧ್ಯಕ್ಷತೆ ವಹಿಸಿದ್ದರು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ರವಿಶಂಕರ್ ಹೆಗಡೆ ವರದಿ ವಾಚಿಸಿದರು. ಉಪ ಪ್ರಾಂಶುಪಾಲ ದೀಪಕ್ ಕುಡ್ವ ಉಪಸ್ಥಿತರಿದ್ದರು. ಶಿಕ್ಷಕ ಶಿವರಾಜ್ ಸ್ವಾಗತಿಸಿ, ಶಿಕ್ಷಕಿ ತಾರಾ ಸಾಲ್ಯಾನ್ ವಂದಿಸಿದರು.
ಚೈತ್ರ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.