

ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಐ.ಟಿ.ನಿರ್ದೇಶಕ ಅಂಕುಶ್ ಎನ್ ನಾಯಕ್ ಮಾತನಾಡಿ ‘ ವಿದ್ಯಾರ್ಥಿಗಳು ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ಹವ್ಯಾಸಗಳಿಗೆ ಮೀಸಲಿಡಬೇಕು, ಪ್ರತಿಯೊಬ್ಬರೂ ಸಂಗೀತ ಕಲಿಯಬೇಕು, ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆಯನ್ನು ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ.ಭಾರತೀಯ ಶಾಸ್ತ್ರೀಯ ಸಂಗೀತ ಶೈಲಿಯನ್ನು ಅದರ ಪ್ರಾಮುಖ್ಯತೆ ಅರಿತು ಗೌರವಿಸಬೇಕು ಎಂದು ಅವರು ಹೇಳಿದರು.
ಅನೇಕ ಯುವ ಸಂಗೀತಕಾರರು ಇಂದು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ನಮ್ಮ ದೇಶದ ಸಂಗೀತಕ್ಕೆ ಜಗತ್ತಿನಲ್ಲಿ ಮನ್ನಣೆಯಿದೆ . ಜಗತ್ತಿನ ಬೇರೆ ಬೇರೆ ದೇಶದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಅಲಿಸುವ ಜನರು ದೊಡ್ಡ ಪ್ರಮಾಣದಲ್ಲಿ ಸಂಗೀತ ಕಚೇರಿ ಆಯೋಜಿಸಿದಾಗ ಸೇರುತ್ತಾರೆ. ಆದರೆ ಭಾರತದಲ್ಲಿ ಈ ಸಂಖ್ಯೆ ಕಡಿಮೆಯಾಗುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದರು.
ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ. ಸಿ. ನಾಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಮುಖ್ಯ ಸಲಹೆಗಾರ
ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿದ್ದರು. ಶಿಕ್ಷಕಿ ಅರುಣೀತ ಕಾರ್ಯಕ್ರಮ ನಿರೂಪಿಸಿದರು.