ಶಕ್ತಿ ವಸತಿ ಶಾಲೆಗೆ ಇಂಡಿಯಾ ಕೆ 12 ಸ್ಕೂಲ್ ಪ್ರಶಸ್ತಿ

ssssssssssss
Published on



ಮಂಗಳೂರು : ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಶಕ್ತಿ ವಸತಿ ಶಾಲೆಗೆ ಇಂಡಿಯಾ ಏ12 ಸ್ಕೂಲ್ ಅವಾರ್ಡ್ ಎಂಬ ಮಾನ್ಯತಾ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಎಲ್ಡ್ರಾಕ್ ಆಯೋಜಿಸಿದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶೈಕ್ಷಣಿಕ ಸಮ್ಮೇಳನದಲ್ಲಿ ದೇಶದ ವಿವಿಧ ಶಾಲೆಗಳ ಪ್ರಾಂಶುಪಾಲರು , ನಿರ್ದೇಶಕರು , ಶಿಕ್ಷಣ ತಜ್ಞರು ಭಾಗವಹಿಸಿದ್ದರು. ಎಲ್ಡ್ರಾಕ್ ಭಾರತದ ಪ್ರಮುಖ ಬಿ2ಬಿ ಕಾನ್ಫರೆನ್ಸ್ ಮತ್ತು ಪ್ರದರ್ಶನಗಳ ಕಂಪನಿಯಾಗಿದ್ದು, ಶಿಕ್ಷಣ ಕ್ಷೇತ್ರಗಳಿಗೆ ಮೀಸಲಾಗಿದೆ. ಬಬಿತಾ ಸೂರಜ್ ಅವರು ಸಮ್ಮೇಳನದ ಪ್ಯಾನೆಲ್ ಚರ್ಚೆಗಳಲ್ಲಿ ಭಾಗವಹಿಸಿದರು.
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅವರನ್ನು ಶಕ್ತಿ ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ. , ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್.ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net