ಮಹಿಳೆಯರಿಗೆ ‘ಶಕ್ತಿ ಯೋಜನೆ’ ವರದಾನ

SIRSI BUS
Published on

ಶಿರಸಿ: ಮಹಿಳೆಯರಿಗೆ ಶಕ್ತಿ ಯೋಜನೆ ವರದಾನವಾಗಿದೆ. ಕಡಿಮೆ ವೇತನದಲ್ಲಿಯೂ ದುಡಿಯುವ ನಾರಿಯರಿಗೆ ಉಚಿತ ಸಾರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಾರಿ ಶಕ್ತಿ ಸಂಭ್ರಮಾಚರಣೆ ಅಂಗವಾಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣದ ಪ್ರಮುಖ ಹೆಜ್ಜೆಯಾದ ‘ಶಕ್ತಿ’ ಯೋಜನೆಯು ಇಂದಿಗೆ 500 ಕೋಟಿ ಪ್ರಯಾಣಿಕರನ್ನು ತಲುಪುವ ಮೂಲಕ ದಾಖಲೆ ನಿರ್ವಿುಸಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸುವ ಮೂಲಕ, ಪ್ರಪಂಚ ಮತ್ತು ದೇಶದಲ್ಲಿಯೇ ಒಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟ ಏಕೈಕ ಸರ್ಕಾರ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರವಾಗಿದೆ. ಈ ಸಾಧನೆಯು ನಮಗೆ ಅಪಾರ ಹೆಮ್ಮೆ ತಂದಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲೂಕಾಧ್ಯಕ್ಷೆ ಸುಮಾ ವೆರ್ಣೆಕರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಪ್ರಸ್ನನ ಶೆಟ್ಟಿ, ಜ್ಯೋತಿ ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net