* ರಾಜ್ಯ ಸರ್ಕಾರಕ್ಕೆ ನೂರು ದಿನ ಶಕ್ತಿ ಯೋಜನೆ ದ.ಕ.ಜಿಲ್ಲೆಯಲ್ಲಿ 34.06 ರೂ.ಮೌಲ್ಯದ ಶೂನ್ಯ ಟಿಕೆಟ್ ವಿತರಣೆ

bbbbbbbb
Published on


ಮಂಗಳೂರು : ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸೋಮವಾರ ದಿನ ಪೂರೈಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ, ಜನ ಸಾಮಾನ್ಯರಲ್ಲಿ ಸಂತಸ ಮೂಡುವಂತೆ ಮಾಡಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ದ.ಕ.ಜಿಲ್ಲೆಯಲ್ಲೂ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದ್ದು, ಜಿಲ್ಲಾಡಳಿತದ ಮೂಲಕ ಜಿಲ್ಲೆಯ ಎಲ್ಲ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸಲು ಅವಿರತ ಶ್ರಮಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಜೂ.11 ರಂದು ಜಾರಿಯಾಗಿದ್ದು, ಅಂದಿನಿಂದ ಒಟ್ಟು 34,06,52,000 ರೂ.ಮೌಲ್ಯದ ಶೂನ್ಯ ಟಿಕೆಟ್‌ಗಳನ್ನು ವಿತರಿಸಲಾಗಿದೆ.
ವಾರಾಂತ್ಯದಲ್ಲಿ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಗೆ ಹೊರ ಜಿಲ್ಲೆಯಿಂದ ಹೆಚ್ಚಿನ ಮಹಿಳಾ ಪ್ರಯಾಣಿಕರು ಆಗಮಿಸುತ್ತಿದ್ದು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಆದಾಯ ಬರುತ್ತಿದೆ.
ಪ್ರತೀ ತಿಂಗಳು 2000 ರೂ.ನೀಡುವ ಗೃಹಲಲಕ್ಷ್ಮಿ ಯೋಜನೆಗೆ ಜಿಲ್ಲೆಯ ಅರ್ಹ 3,99,022 ಕುಟುಂಬಗಳ ಪೈಕಿ ಇದುವರೆಗೆ 3,05,358 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಯೋಜನೆಯ ಫಲಾನುಭವಿಗಳಿಗೆ ಖಾತೆಗೆ ಡಿಬಿಟಿ ಮೂಲಕ ಹಣ
ಪಾವತಿಯಾಗಲಿದೆ.
200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ಅರ್ಹ 5.59 ಲಕ್ಷ ವಿದ್ಯುತ್ ಬಳಕೆಗೆ ಗ್ರಾಹಕರಲ್ಲಿ ಇದುವರೆಗೆ 3.53 ಲಕ್ಷ ಗ್ರಾಹಕರಿಗೆ ಸಹಾಯಧನ ಬಿಲ್ ವಿತರಿಸುವ ಮೂಲಕ ಅಂದಾಜು 21.61 ಕೋಟಿ ರೂ.
ವಿನಾಯಿತಿ ನೀಡಲಾಗಿದೆ. ಯೋಜನೆಯ ನೋಂದಣಿಗೆ ಅಂತಿಮ ದಿನಾಂಕ ಇರುವುದಿಲ್ಲ.
ಅನ್ನ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಅಂತ್ಯೋದಯ 15,520 ಹಾಗೂ 1,97,200 ಆದ್ಯತಾ ಪಡಿತರ ಚೀಟಿಯ ಸದಸ್ಯರಿಗೆ, ಪ್ರತಿ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿಯಂತೆ ಅಕ್ಕಿ ವಿತರಿಸಲು ಆಹಾರಧಾನ್ಯ ಬದಲು ನೇರ ನಗದು ವರ್ಗಾವಣೆಯಡಿ 30.03 ಕೋಟಿ ರೂ.ಅನುದಾನವನ್ನು ರಾಜ್ಯ ಸರ್ಕಾರದಿಂದ ಪಾವತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
..................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net