

ಮುದ್ದೇಬಿಹಾಳ: ಇಲ್ಲಿನ ಎಸ್ಜಿವಿಸಿ ವಿದ್ಯಾಪ್ರಸಾರಕ ಟ್ರಸ್ಟ್ನ ಎಂಜಿವಿಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಕುಂತಲಾ ಶಿವಯೋಗಿ ಅವರು 2022&23ನೇ ಸಾಲಿನ ಸೆಪ್ಟೆಂಬರ್&ಅಕ್ಟೋಬರ್ನಲ್ಲಿ ನಡೆದ ಬಿಕಾಂ ಅಂತಿಮ ಪರೀೆಯಲ್ಲಿ ಹೆಚ್ಚು ಅಂಕ ಪಡೆದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 4ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯದ ಪರೀಾಂಗ ವಿಭಾಗದವರು ಕಾಲೇಜಿಗೆ ಮಾಹಿತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಪ್ರೊ.ಎಸ್.ಎನ್.ಪೋಲೇಶಿ ತಿಳಿಸಿದ್ದಾರೆ.
ಆಡಳಿತ ಮಂಡಳಿಯವರು, ಪ್ರಾಧ್ಯಾಪಕರು ವಿದ್ಯಾರ್ಥಿನಿಯ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.