

ವಿಜಯವಾಣಿ ಸುದ್ದಿಜಾಲ ಧಾರವಾಡ
ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನ ಹಾಗೂ ಡಾ. ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನಗಳ ಆಶ್ರಯದಲ್ಲಿ `ಧಾರವಾಡದ ಶಾಲಾಶಿಕ್ಷಣ ಸಂಕಥನ' ಪುಸ್ತಕ ಲೋಕಾರ್ಪಣೆಯನ್ನು ಜ. 4ರಂದು ಬೆಳಗ್ಗೆ 11 ಗಂಟೆಗೆ ಇಡೀ ದಿನ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಶಿಕ್ಷಣತಜ್ಞ ಶಿವಶಂಕರ ಹಿರೇಮಠ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ತೋಂಟದಾರ್ಯ ಮಠದ ಜಗದ್ಗುರು ಡಾ. ಸಿದ್ಧರಾಮ ಸ್ವಾಮೀಜಿ ಸಮÁರಂಭ ಉದ್ಘಾಟಿಸುವರು. ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಅಧ್ಯಕ್ಷತೆ ವಹಿಸುವರು. ಭಾರತೀಯ ತಂತ್ರಜ್ಞಾನ ಸಂಸ್ಥೆಯ ಗೌರವ ಪ್ರಾಧ್ಯಾಪಕ ಪ್ರೊ. ಎಸ್.ಎಂ. ಶಿವಪ್ರಸಾದ್ ಕೃತಿ ಲೋಕಾರ್ಪಣೆ ಮಾಡುವರು. ಶಾಲಾ ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಸಿದ್ದರಾಮ ಮನಹಳ್ಳಿ ಪುಸ್ತಕ ಪರಿಚಯ ಮಾಡುವರು. ಮಧ್ಯಾಹ್ನ 3 ಗಂಟೆಗೆ ಸಂವಾದ ನಡೆಯಲಿದೆ ಎಂದರು.
ನಿವೃತ್ತ ಡಿಡಿಪಿಐ ಎಸ್.ಬಿ. ಕೊಡ್ಲಿ ಮಾತನಾಡಿ, ಹಿರಿಯ ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಹಾಗೂ ಪತ್ನಿ, ಶಿಕ್ಷಕಿಯರ ಸರ್ಕಾರಿ ತರಬೇತಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯೆ ಶಾಂತಲಾ ಹಿರೇಮಠ ಅವರನ್ನು ಗೌರವಿಸಲಾಗುವುದು ಎಂದರು.