ಶಂಭುನಾಥ ಶ್ರೀಗಳ ಹುಟ್ಟುಹಬ್ಬ ಆಚರಣೆ

10ark-3
Published on

ಅರಕಲಗೂಡು: ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರ 45ನೇ ವರ್ಷದ ಹುಟ್ಟು ಹಬ್ಬವನ್ನು ಪಟ್ಟಣದಲ್ಲಿ ಭಕ್ತರು ಭಾನುವಾರ ಸಂಭ್ರಮದಿಂದ ಆಚರಿಸಿದರು.


ಗ್ರಾಮ ದೇವತೆ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶ್ರೀಗಳಿಗೆ ಆಯಸ್ಸು, ಆರೋಗ್ಯ ನೀಡುವಂತೆ ಪ್ರಾರ್ಥಿಸಿದರು. ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.


ಬಿಜಿಎಸ್ ಕಾಲೇಜು ಪ್ರಾಂಶುಪಾಲ ಮಹೇಶ್ ಹೊಡೆನೂರು ಮಾತನಾಡಿ, ಸಮಾಜ ಸೇವೆಗೆ ತಮ್ಮ ಬದುಕು ಮುಡುಪಾಗಿಟ್ಟಿರುವ ಶ್ರೀಗಳು ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಯ ಮಠಾಧೀಶರಾಗಿ ಧರ್ಮ, ಸಂಸ್ಕೃತಿ ಮತ್ತು ಸಾಮಾಜಿಕ ಚಿಂತನೆಯೊಂದಿಗೆ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಚಿತ್ರಣವನ್ನು ಉತ್ತಮ ಸ್ಥಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.


ಪಪಂ ಸದಸ್ಯೆ ರಶ್ಮಿ, ಮುಖಂಡರಾದ ಬೈಚನಹಳ್ಳಿ ರಾಜೀವ್, ಪ್ರಭು ಶ್ರೀಧರ್, ಸುರೇಶ್, ರಾಜೇಶ್, ಹೆಂಟಗೆರೆ ಧರ್ಮಣ್ಣ, ಅನಿಲ್‌ಗೌಡ, ವಕೀಲ ರೇವಣ, ತಾಲೂಕು ಮಹಿಳಾ ಒಕ್ಕಲಿಗರ ಸಂಘದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net