ಕರ್ನಾಟಕವೇ ತಲೆ ತಗ್ಗಿಸುವ ಘಟನೆ

prahlad joshi
Published on

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಗ್ಯಾಂಗ್​ರೇಪ್ ಘಟನೆ ಅಮಾನವೀಯ ಮತ್ತು ಕರ್ನಾಟಕವೇ ತಲೆ ತಗ್ಗಿಸುವ ಘಟನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್ ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸಂಬಂಧ ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಸರ್ಕಾರಕ್ಕೆ ಜನರ ಕ್ಷೇಮಕ್ಕಿಂತ ಅವರ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಯುವತಿಯ ರಕ್ಷಣೆಗೆ ಮುಂದಾಗಬೇಕು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net