ಜ.5ಕ್ಕೆ ಕಣೆಮರಡ್ಕದಲ್ಲಿ ಶನೈಶ್ಚರ ಪೂಜೆ

Published on

ಸುಳ್ಯ: ಮಂಡೆಕೋಲು ಕಣೆಮರಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ 3ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಶನೈಶ್ಚರಪೂಜೆ ಜ.5ರಂದು ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಜ.5ರಂದು ಬೆಳಗ್ಗೆ ಗಣಪತಿ ಹವನ, ಗುಳಿಗ ದೈವದ ಕಟ್ಟೆಗೆ ಪೂಜೆ, ತಂಬಿಲ, ಶ್ರೀ ಶನೈಶ್ಚರ ಪೂಜೆ, ಮಧ್ಯಾಹ್ನ ಮಹಾಪೂಜೆ, ಭಜನಾ ಸಂಕೀರ್ತನೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಗುರುವಂದನೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ.ಉದ್ಘಾಟನೆಯನ್ನು ವಾಜಿ ಸಂಸದ ನೆರವೇರಿಸಲಿದ್ದು, ಧಾರ್ಮಿಕ ಉಪನ್ಯಾಸವನ್ನು ದಯಾನಂದ ಕತ್ತಲ್‌ಸಾರ್ ನೀಡಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಹಲವಾರು ಗಣ್ಯರು ಭಾಗವಹಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪದಾಧಿಕಾರಿಗಳಾದ ಪ್ರಕಾಶ್, ಅನಿಲ್ ತೋಟಪ್ಪಾಡಿ, ಪ್ರೀತೇಶ್, ಸಂತೋಷ್, ಪ್ರವೀಣ್ ಮುಳ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net